alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಹಾರ್ದಿಕ್ ಪಟೇಲ್ ನಡೆ

ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಬಿಜೆಪಿ ತಯಾರಿ ನಡೆಸುತ್ತಿದ್ದರೆ, ಈ ಬಾರಿ ಶತಾಯಗತಾಯ ಬಹುಮತ ಗಳಿಸಿ ಗದ್ದುಗೆ ಪಡೆಯಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

ಪಾಟಿದಾರ್ ಅನಾಮತ್ ಆಂದೋಲನ ಸಮಿತಿಯ ಪ್ರಮುಖ ನಾಯಕ ಹಾರ್ದಿಕ್ ಪಟೇಲ್ ರ ಬೆಂಬಲ ಪಡೆಯುವ ಸಲುವಾಗಿ ಕಾಂಗ್ರೆಸ್ ಯತ್ನ ನಡೆಸುತ್ತಿರುವ ಮಧ್ಯೆ ಹಾರ್ದಿಕ್ ಪಟೇಲ್ ಎನ್.ಸಿ.ಪಿ. ನಾಯಕರನ್ನು ಭೇಟಿ ಮಾಡುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಲು ಹಾರ್ದಿಕ್ ಪಟೇಲ್ ಕೆಲ ಶರತ್ತು ವಿಧಿಸಿದ್ದು, ಈ ಪೈಕಿ ನಾಲ್ಕು ಶರತ್ತುಗಳಿಗೆ ಕಾಂಗ್ರೆಸ್ ಒಪ್ಪಿಗೆ ನೀಡಿದೆ. ಆದರೆ ಪ್ರಮುಖ ಬೇಡಿಕೆಯಾದ ಪಟೇಲ್ ಸಮುದಾಯಕ್ಕೆ ಒಬಿಸಿ ಸ್ಥಾನಮಾನ ನೀಡುವ ಕುರಿತು ಮೀನಾಮೇಷ ಎಣಿಸುತ್ತಿದೆ.

ಈ ಹಿನ್ನಲೆಯಲ್ಲಿ ಹಾರ್ದಿಕ್ ಪಟೇಲ್ ಎನ್.ಸಿ.ಪಿ. ಮುಖಂಡರಾದ ಪ್ರಫುಲ್ ಪಟೇಲ್ ಹಾಗೂ ಜಯಂತ್ ಪಟೇಲ್ ರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಾರ್ದಿಕ್ ಪಟೇಲ್ ಇದೊಂದು ಸೌಹಾರ್ದಯುತ ಭೇಟಿ ಎಂದಿದ್ದಾರೆ. ಆದರೆ ತಮ್ಮ ಪ್ರಮುಖ ಬೇಡಿಕೆ ಈಡೇರಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒತ್ತಡ ಹೇರುವ ಸಲುವಾಗಿ ಹಾರ್ದಿಕ್ ಪಟೇಲ್ ಈ ತಂತ್ರ ಅನುಸರಿಸಿದ್ದಾರೆಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...