alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಪರ್: 18218 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಖುಷಿ ಸುದ್ದಿ. ಹರ್ಯಾಣ ಸ್ಟಾಪ್ ಸೆಲೆಕ್ಷನ್ ಕಮಿಷನ್ ವಿವಿಧ ಡಿಪಾರ್ಟ್ಮೆಂಟ್ ಗಳಿಗೆ ಅರ್ಜಿ ಕರೆದಿದೆ. ಸ್ಟಾಪ್ ಸೆಲೆಕ್ಷನ್ ಕಮಿಷನ್ ಗ್ರೂಪ್ ಡಿ ಗಾಗಿ 18218 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಈ ಸಂಬಂಧ ಹರ್ಯಾಣ ಸ್ಟಾಪ್ ಸೆಲೆಕ್ಷನ್ ಕಮಿಷನ್ ನೊಟೀಸ್ ಜಾರಿ ಮಾಡಿದೆ.

ಜಾರಿಯಾಗಿರುವ ನೊಟೀಸ್ ಪ್ರಕಾರ, ಆಗಸ್ಟ್ 28 ರಿಂದಲೇ ಅರ್ಜಿ ತುಂಬುವ ಪ್ರಕ್ರಿಯೆ ಶುರುವಾಗಿದೆ. ಯೋಗ್ಯ ಅಭ್ಯರ್ಥಿಗಳು ಸೆಪ್ಟೆಂಬರ್ 19,2018 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ ಮೂಲಕ ಯೋಗ್ಯ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಗಣಿತ, ವಿಜ್ಞಾನ, ಇಂಗ್ಲೀಷ್, ಹಿಂದಿಗೆ ಸಂಬಂಧಿಸಿದ ಪ್ರಶ್ನೆಗಳಿರಲಿವೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು. ಹತ್ತನೇ ತರಗತಿಯಲ್ಲಿ ಹಿಂದಿ ಅಥವಾ ಸಂಸ್ಕೃತವನ್ನು ಓದಿರಬೇಕು. ಈ ನೇಮಕಾತಿ ವಿವಿಧ ವಿಭಾಗಗಳು ಹಾಗೂ ಮಂಡಳಿಗಳಿಗೆ ನಡೆಯಲಿದೆ. ವಯಸ್ಸು 18ರಿಂದ 42 ವರ್ಷದೊಳಗಿರಬೇಕು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...