alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಾರ್ವಜನಿಕ ಹಿತಾಸಕ್ತಿ ಅರ್ಜಿಯೋ ಇಲ್ಲ ರಾಜಕೀಯ ಪ್ರೇರಿತ ಅರ್ಜಿಯೋ’

ಇಂದೋರ್‌: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರುಣ್‌ ಮಿಶ್ರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ(ಪಿಐಎಲ್‌) ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ನ್ಯಾಯಾಲಯಕ್ಕೆ ಹೊಸ ಕಟ್ಟಡದ ಶಂಕುಸ್ಥಾಪನೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮಹತ್ವ ಕಳೆದುಕೊಳ್ಳುತ್ತಿದೆ. ರಾಜಕೀಯ ಪ್ರೇರಿತವಾದ ಅರ್ಜಿಗಳು ಪಿಐಎಲ್‌ ರೂಪದಲ್ಲಿ ಸಲ್ಲಿಕೆಯಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಿಐಎಲ್‌ ಎಂಬುದು ನ್ಯಾಯಾಂಗ ವ್ಯವಸ್ಥೆಯ ಶಕ್ತಿಶಾಲಿ ಅಂಗ. ಇದನ್ನು ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿರುವುದು ಆತಂಕಕಾರಿ ಸಂಗತಿ. ಇದೇ ರೀತಿ ಮುಂದುವರಿದರೆ, ಪಿಐಎಲ್‌ನ್ನು ಮರು ವ್ಯಾಖ್ಯಾನ ಮಾಡಬೇಕಾದ ಸಮಯ ಸನ್ನಿಹಿತವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅನೇಕ ಬಾರಿ ಪಿಐಎಲ್‌ಗಳು ವೈಯಕ್ತಿಕ ಆಸಕ್ತಿಯನ್ನೂ ಒಳಗೊಂಡು ಪರ್ಸನಲ್‌ ಇಂಟರೆಸ್ಟ್‌ ಲಿಟಿಗೇಷನ್‌ ಆಗಿಬಿಡುತ್ತಿವೆ. ನ್ಯಾಯವಾದಿಗಳು ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವ ಮುನ್ನ ಅರ್ಜಿಗಳ ಮಹತ್ವವನ್ನು ತಿಳಿಯಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಹೇಮಂತ್‌ ಗುಪ್ತಾ, ಕಾನೂನು ಸಚಿವ ರಾಮ್‌ಪಾಲ್‌ ಸಿಂಗ್‌ ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...