alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಾರಸ್ವಾಮಿ ದೆಹಲಿಗೆ ತೆರಳುವ ಮುನ್ನವೇ ರಾಹುಲ್ ನಡೆಸಿದ್ರು ಸಭೆ

ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಕುಮಾರಸ್ವಾಮಿ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಚಿವ ಸಂಪುಟ ರಚನೆ ಕುರಿತು ಕುಮಾರಸ್ವಾಮಿ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.

ಕುಮಾರಸ್ವಾಮಿ ದೆಹಲಿಗೆ ತೆರಳುವ ಮುನ್ನವೇ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸಭೆ ಕರೆದು ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ಮನೆಯಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್, ವೇಣುಗೋಪಾಲ್ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಗುಲಾಂ ನಬಿ ಆಜಾದ್, ರಾಹುಲ್ ಗಾಂಧಿ ಹಾಗೂ ಕುಮಾರಸ್ವಾಮಿ ಸೇರಿ ಕ್ಯಾಬಿನೆಟ್ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ನಮ್ಮ ಶಾಸಕರು ಒಗ್ಗಟ್ಟಿನಲ್ಲಿದ್ದು, ವಿಶ್ವಾಸಮತ ಯಾಚನೆಯಲ್ಲಿ ಯಶಸ್ವಿಯಾಗಲಿದ್ದೇವೆ ಎಂದಿದ್ದಾರೆ. ಮೂಲಗಳ ಪ್ರಕಾರ ಕುಮಾರಸ್ವಾಮಿಯೊಬ್ಬರೇ ಬುಧವಾರ ಪದಗ್ರಹಣ ಮಾಡಲಿದ್ದಾರಂತೆ. ಕೆಲವೇ ಕೆಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆಯಂತೆ. ಆದ್ರೆ ಇಡೀ ಮಂತ್ರಿ ಮಂಡಲ ಬಹುಮತ ಸಾಬೀತಿನ ನಂತ್ರ ಪದಗ್ರಹಣ ಮಾಡಲಿದ್ದಾರಂತೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...