alex Certify
ಕನ್ನಡ ದುನಿಯಾ       Mobile App
       

Kannada Duniya

10ನೇ ತರಗತಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ಪರಾರಿ

depressed-girlವಿದ್ಯೆ ಕಲಿಸುವ ಗುರುವೇ ವಿದ್ಯಾರ್ಥಿನಿಯೊಬ್ಬಳ ಪಾಲಿಗೆ ಕೀಚಕನಾದ ಘಟನೆ ಒಡಿಶಾದಲ್ಲಿ ನಡೆದಿದೆ. 10 ನೇ ತರಗತಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದುಕೊಂಡ ಹೋದ ಮುಖ್ಯ ಶಿಕ್ಷಕ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದೀಗ ಕಾಮುಕನನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಒಡಿಶಾದ ಕೋರಪುಟ್ ಜಿಲ್ಲೆಯ ಚಂದಕಾ ಗ್ರಾಮದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ 55 ವರ್ಷದ ಗೋವರ್ಧನ್ ಎಂಬಾತ 10 ನೇ ತರಗತಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದಾನೆ. ಪರೀಕ್ಷೆ ಮುಗಿದರೂ ಮಗಳು ಹಾಸ್ಟೆಲ್ ನಿಂದ ಮನೆಗೆ ಬಾರದ ಕಾರಣ ಆತಂಕಗೊಂಡ ಪೋಷಕರು ದೂರು ನೀಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯನ್ನು ಮಾರ್ಚ್ 17 ರಂದು ಕರೆದುಕೊಂಡು ಹೋಗಿದ್ದ ಗೋವರ್ಧನ್, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡ ವೇಳೆ ಮುಖ್ಯ ಶಿಕ್ಷಕನೊಂದಿಗೆ ವಿದ್ಯಾರ್ಥಿನಿ ಇದ್ದುದು ಕಂಡು ಬಂದಿದೆ. ಸೋಮವಾರ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿರುವ ಪೊಲೀಸರು ಆಕೆಯನ್ನು ಮಕ್ಕಳ ಸುರಕ್ಷಾ ಕೇಂದ್ರಕ್ಕೆ ದಾಖಲಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...