alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಸರ್ಕಾರಕ್ಕೆ ‘ಸುಪ್ರೀಂ’ ಶಾಕ್: ಅಯೋಧ್ಯೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಅಯೋಧ್ಯೆಯ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ನಡೆದು ತೀರ್ಪು ಹೊರ ಬೀಳಬಹುದೆಂಬ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಈ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹಾಗೂ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಪೀಠ ವಿಚಾರಣೆಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಿದೆ.

ಈವರೆಗೆ ಅಯೋಧ್ಯೆ ವಿವಾದವನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸೇರಿದಂತೆ ತ್ರಿಸದಸ್ಯರ ಪೀಠ ನಡೆಸುತ್ತಿತ್ತು. ಆದ್ರೆ ದೀಪಕ್ ಮಿಶ್ರಾ ನಿವೃತ್ತಿಯಾಗಿದ್ದು,ಸೋಮವಾರ ಹೊಸಬರು ಪ್ರಕರಣ ಕೈಗೆತ್ತಿಕೊಂಡಿದ್ದಾರೆ. ಕಳೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮುಸ್ಲಿಂ ಸಂಘಟನೆಗಳಿಗೆ ಶಾಕ್ ನೀಡಿತ್ತು. ನಮಾಜ್ ಮಾಡಲು ಮಸೀದಿಯೆ ಆಗಬೇಕಿಲ್ಲವೆಂದು 1994ರಲ್ಲಿ ಅಲಹಾಬಾದ್ ಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿತ್ತು.

ಅಯೋಧ್ಯೆ ವಿವಾದ ಇಂದು ನಿನ್ನೆಯದಲ್ಲ. ಅಯೋಧ್ಯೆಯಲ್ಲಿ ಬಾಬರ್,ಬಾಬ್ರಿ ಮಸೀದಿ ನಿರ್ಮಿಸಿದ್ದರು. ಅದನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಕೆಡವಿದ್ದಾರೆಂಬ ಆರೋಪವಿದೆ. ಈ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಮಾಡದಂತೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್ ಕೋರ್ಟ್ 2010ರಲ್ಲಿ ಅಯೋಧ್ಯೆಯನ್ನು ಮೂರು ಭಾಗವಾಗಿ ವಿಂಗಡನೆ ಮಾಡಿತ್ತು. ಆದ್ರೆ ಇದನ್ನು ಪ್ರಶ್ನೆ ಮಾಡಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ. ಇಂದು ಸುಪ್ರೀಂ ಇದ್ರ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...