alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳುನಾಡು CM ಜಯಲಲಿತಾರಿಗೆ ಹೃದಯಾಘಾತ

jayalalta

ಚೆನ್ನೈ: ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಹೃದಯಾಘಾತವಾಗಿದ್ದು, ಐ.ಸಿ.ಯು.ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಜೆ ವೇಳೆಗೆ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಹೃದಯ, ಶ್ವಾಸಕೋಶ ತಜ್ಞರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಆಸ್ಪತ್ರೆ ಎದುರು ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದಾರೆ. ಮುಂಬೈನಲ್ಲಿದ್ದ ರಾಜ್ಯಪಾಲರು ವಿಶೇಷ ವಿಮಾನದಲ್ಲಿ ಚೆನ್ನೈಗೆ ಹೊರಟಿದ್ದಾರೆ. ಅಪೊಲೊ ಆಸ್ಪತ್ರೆಗೆ ಸಚಿವರು, ಶಾಸಕರು ಧಾವಿಸಿದ್ದು, ಜಯಲಲಿತಾ ಆರೋಗ್ಯ ವಿಚಾರಿಸಿದ್ದಾರೆ.

ಕಳೆದ ಸೆಪ್ಟಂಬರ್ 22 ರಿಂದ ಜಯಲಲಿತಾ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗಿತ್ತಾದರೂ ಬರೋಬ್ಬರಿ 72 ದಿನಗಳಿಂದ ಜಯಲಲಿತಾ ಅವರು ಆಸ್ಪತ್ರೆಯಲ್ಲಿದ್ದರು. ಇದೀಗ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...