alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾಫಿಕ್ ಜಾಮ್ ಗೆ ದೆಹಲಿ ತತ್ತರ

del-rain-580x395

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಬೆಳಿಗ್ಗೆಯಿಂದ ಸುರಿಯುತ್ತಿರುವ ಬಾರಿ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ದೊಡ್ಡ ಸಮಸ್ಯೆ ತಂದೊಡ್ಡಿದೆ. ದೆಹಲಿ, ಗುರ್ಗಾಂವ್, ನೋಯ್ಡಾ ಮತ್ತು ಘಾಜಿಯಾಬಾದ್ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲೂ ವ್ಯತ್ಯಯವುಂಟಾಗಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದೆ. ವಾಹನಗಳು ನೀರಿನಲ್ಲಿ ಮುಳುಗಿದ್ದು, ಸಹಾಯ ವಾಣಿ ಈಗಾಗಲೇ 100ಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರಾಫಿಕ್ ಸಮಸ್ಯೆ ತಪ್ಪಿಸುವ ಸಲುವಾಗಿ ಮಾರ್ಗ ಬದಲಾವಣೆ ಕಾರ್ಯದಲ್ಲಿ ಟ್ರಾಫಿಕ್ ಪೊಲೀಸರು ನಿರತರಾಗಿದ್ದಾರೆ. ಇಂದು ಹಾಗೂ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಿಂದಿನ ತಿಂಗಳಷ್ಟೇ ಗುರ್ಗಾಂವ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ನೀರು ರಸ್ತೆಯ ಮೇಲೆ ನಿಲ್ತಾ ಇರುವುದರಿಂದ ಈ ಸಮಸ್ಯೆ ಎದುರಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದ್ರೆ ಇಂದು ಮತ್ತದೇ ಸ್ಥಿತಿ ನಿರ್ಮಾಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...