alex Certify
ಕನ್ನಡ ದುನಿಯಾ       Mobile App
       

Kannada Duniya

`ರಾಮ್ ಜನ್ಮಭೂಮಿ’ ಚಿತ್ರಕ್ಕೆ ಬಾಂಬೆ ಹೈಕೋರ್ಟ್ ತಡೆ

ಇಂದು ಬಿಡುಗಡೆಯಾಗಬೇಕಿದ್ದ ಅಯೋಧ್ಯೆ ರಾಮಜನ್ಮಭೂಮಿ, ಬಾಬ್ರಿ ಮಸೀದಿ ವಿವಾದಗಳ ಕಥೆಯನ್ನೊಳಗೊಂಡ ಸೂರಜ್ ಮಿಶ್ರಾ ನಿರ್ದೇಶನದ `ರಾಮ್ ಜನ್ಮಭೂಮಿ’ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ತಾನೇ ಬಿಡುಗಡೆಯಾಗಿದ್ದ ಚಿತ್ರದ ಟ್ರೈಲರ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿರುವ ಕಾರಣ ಟ್ರೈಲರ್ ಅನ್ನೂ ಯೂ ಟ್ಯೂಬ್ ನಿಂದ ತೆಗೆಯುವಂತೆ ಆದೇಶಿಸಿದೆ.

ಚಿತ್ರದ ಪೋಸ್ಟರ್ ಮತ್ತು ಟ್ರೈಲರ್ ಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಚಿತ್ರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಝರ್ ತಂಬೋಳಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿ.ಪಿ. ಧರ್ಮಾಧಿಕಾರಿ ಮತ್ತು ಎಸ್.ವಿ. ಕೋತ್ವಾಲ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಬಾಬ್ರಿ ಮಸೀದಿ ಧ್ವಂಸದ ಬಳಿಕ ಹಿಂದೂ ಮತ್ತು ಮುಸ್ಲಿಮರ ಏಕತೆಗೆ ಧಕ್ಕೆಯುಂಟಾದ ದೃಶ್ಯಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಬಾಬ್ರಿ ಮಸೀದಿ ಕೆಡವಿದ ದಿನವಾದ ಡಿಸೆಂಬರ್ ಆರರಂದೇ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಚಿಂತನೆ ನಡೆಸಿತ್ತು. ಆದರೆ ಕೋರ್ಟ್ ನಿರ್ದೇಶನದಂತೆ ಚಿತ್ರ ಮತ್ತೊಮ್ಮೆ ಸೆನ್ಸಾರ್ ಮೆಟ್ಟಿಲೇರಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...