alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬೆದರಿಕೆ ಕರೆ

delhi_airport_ebola_rep_AFP_650

ಇತ್ತೀಚೆಗೆ ಹುಸಿ ಬೆದರಿಕೆ ಕರೆಗಳು ಹೆಚ್ಚುತ್ತಿದ್ದು, ಈ ನಡುವೆಯೇ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಬೆದರಿಕೆ ಕರೆ ಹಲವು ಕಾಲ ಆತಂಕವನ್ನು ಉಂಟು ಮಾಡಿತು.

ಹೌದು. ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಧೇಯ ಕರೆಯೊಂದು ಬಂದಿದ್ದು, ಫೋನಿನಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಮೃತಸರದಿಂದ ಓರ್ವ ಭಯೋತ್ಪಾದಕ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಆತ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾನೆ.

ಈ ಕರೆ ಸ್ವೀಕರಿಸಿದ ಸಿಬ್ಬಂದಿಗಳು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿಯನ್ನು ಮುಟ್ಟಿಸಿದ್ದು, ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ನಿಲ್ದಾಣದಲ್ಲಿದ್ದ ಪ್ರತಿಯೊಬ್ಬರನ್ನು ತಪಾಸಣೆಗೊಳಪಡಿಸಿದ್ದು ತದನಂತರ ಇದೊಂದು ಹುಸಿ ಕರೆ ಎನ್ನುವುದು ತಿಳಿಯಿತು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ತನಿಖೆಗೆ ಮುಂದಾಗಿದ್ದು, ಕರೆ ಮಾಡಿರುವ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...