alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಬಸ್ ಕಂದಕಕ್ಕೆ ಬಿದ್ದು 20 ಮಕ್ಕಳ ಸಾವು

ಧರ್ಮಶಾಲಾ: ಹಿಮಾಚಲ ಪ್ರದೇಶದ ನೂರ್ ಪುರದ ಮಾಲ್ಕಾವಾಲ್ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 20 ಮಕ್ಕಳು ಮೃತಪಟ್ಟಿದ್ದಾರೆ.

ವಜೀರ್ ರಾಮ್ ಸಿಂಗ್ ಪಥಾನಿಯಾ ಶಾಲೆಗೆ ಸೇರಿದ ಬಸ್ ಇದಾಗಿದ್ದು, ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರೀ ಆಳದ ಕಮರಿಗೆ ಬಿದ್ದಿದೆ.

ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ, ಈ ವೇಳೆಗಾಗಲೇ ಅಪಘಾತದ ತೀವ್ರತೆಗೆ ಅನೇಕ ಮಕ್ಕಳು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ 15 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಾಳುಗಳಲ್ಲಿ ಅನೇಕ ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗಬಹುದೆಂದು ಹೇಳಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಸಂಖ್ಯೆಯ ವೈದ್ಯರನ್ನು ಸ್ಥಳೀಯ ಆಸ್ಪತ್ರೆಗೆ ಕಳಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ತುರ್ತು ಸೇವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...