alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ತೆಕ್ಕೆಗೆ ಹಿಮಾಚಲ ಪ್ರದೇಶ

ಹಿಮಾಚಲ ಪ್ರದೇಶದಲ್ಲಿ 32 ವರ್ಷಗಳ ಸಂಪ್ರದಾಯ ಮುಂದುವರೆದಿದೆ. ಈ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಿಮಾಚಲ ಪ್ರದೇಶದ 68 ಸೀಟುಗಳ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಈಗಾಗಲೇ 67 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ.

ಇತ್ತೀಚಿಗೆ ಬಂದ ವರದಿ ಪ್ರಕಾರ ಬಿಜೆಪಿ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 24 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಮೂರು ಸ್ಥಾನಗಳು ಇತರರ ಪಾಲಾಗಿವೆ. 68 ಸೀಟುಗಳ ಹಿಮಾಚಲ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 35 ಸ್ಥಾನಗಳ ಅವಶ್ಯಕತೆಯಿದೆ. ಈಗಾಗಲೇ 41 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಬಹುಮತ ಸರ್ಕಾರ ರಚನೆ ಮಾಡ್ತಿದೆ.

ನವೆಂಬರ್ 9ರಂದು ಹಿಮಾಚಲ ವಿಧಾನಸಭಾ ಕ್ಷೇತ್ರಕ್ಕೆ ಮತದಾನ ನಡೆದಿತ್ತು. ಶೇಕಡಾ 75.28ರಷ್ಟು ಮತದಾನವಾಗಿತ್ತು. ಸದ್ಯ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದು ಕಾಂಗ್ರೆಸ್ ಬಳಿ 35 ಸೀಟುಗಳಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...