alex Certify
ಕನ್ನಡ ದುನಿಯಾ       Mobile App
       

Kannada Duniya

ಭೂಕುಸಿತ : ಕನಿಷ್ಠ 5 ಮಂದಿ ಸಾವು

hm-land

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭಾರೀ ಭೂಕುಸಿತವಾಗಿದ್ದು, ಕನಿಷ್ಠ 5 ಮಂದಿ ಮೃತಪಟ್ಟು 6 ಮಂದಿ ಗಾಯಗೊಂಡಿದ್ದಾರೆ.

ಮಣ್ಣಿನಡಿ ಸಿಲುಕಿದ್ದ 6 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಮಂಡಿ ಜಿಲ್ಲೆಯ ಪಧರ್ ಪ್ರದೇಶದಲ್ಲಿ ಭಾರೀ ಮಳೆಯಾದ ಕಾರಣ ಭೂ ಕುಸಿತವಾಗಿ ಈ ದುರಂತ ಸಂಭವಿಸಿದೆ. ಹೆದ್ದಾರಿಯಲ್ಲಿ ಮಣ್ಣು ಬಿದ್ದು, ಹಲವು ವಾಹನಗಳಿಗೆ ಹಾನಿಯಾಗಿದೆ.

ಭಾರೀ ಮಳೆಯಾಗುತ್ತಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಂಡಿ ಉಪ ವಿಭಾಗಾಧಿಕಾರಿ ಸಂದೀಪ್ ಕದಂ ಘಟನಾ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಪಡೆದುಕೊಂಡಿದ್ದಾರೆ.

ಮಣ್ಣು, ಕಲ್ಲುಗಳಡಿ ವಾಹನಗಳು ಸಿಲುಕಿವೆ. ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಸಾವಿನ ಮತ್ತು ಗಾಯಾಳುಗಳ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...