alex Certify
ಕನ್ನಡ ದುನಿಯಾ       Mobile App
       

Kannada Duniya

CM ಅಭ್ಯರ್ಥಿಯನ್ನು ಘೋಷಿಸಿದ ಅಮಿತ್ ಶಾ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ನವೆಂಬರ್ 9 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಘೋಷಿಸಲಾಗಿದೆ.

ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಧುಮಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರ ಹೆಸರು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿತ್ತಾದರೂ, ಗೊಂದಲಗಳಿಗೆಲ್ಲಾ ಅಮಿತ್ ಶಾ ತೆರೆ ಎಳೆದಿದ್ದಾರೆ.

ಪ್ರೇಮ್ ಕುಮಾರ್ ಧುಮಾಲ್ ಅವರ ನೇತೃತ್ವದಲ್ಲಿ ಬಿ.ಜೆ.ಪಿ. ಚುನಾವಣೆಯನ್ನು ಎದುರಿಸಲಿದೆ. ಅವರು ಪ್ರಸ್ತುತ ಮಾಜಿ ಮುಖ್ಯಮಂತ್ರಿಯಾಗಿದ್ದು, ಡಿಸೆಂಬರ್ 18 ರ ಬಳಿಕ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...