alex Certify
ಕನ್ನಡ ದುನಿಯಾ       Mobile App
       

Kannada Duniya

48 ಗಂಟೆಯಲ್ಲೇ ಮತ್ತೊಬ್ಬ ಪತ್ರಕರ್ತರ ಮೇಲೆ ಫೈರಿಂಗ್

ಪಾಟ್ನಾ: ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದ 48 ಗಂಟೆಯೊಳಗೆ ಬಿಹಾರದಲ್ಲಿ ಪತ್ರಕರ್ತರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

‘ರಾಷ್ಟ್ರೀಯ ಸಹರಾ’ ಹಿಂದಿ ಪತ್ರಿಕೆಯ ವರದಿಗಾರ ಪಂಕಜ್ ಮಿಶ್ರಾ ಅವರ ಮೇಲೆ ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಬೈಕ್ ನಲ್ಲಿ ಬಂದಿದ್ದ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.

ಬ್ಯಾಂಕ್ ನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಿಶ್ರಾ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ.

ಗುಂಡೇಟಿನಿಂದ ಮಿಶ್ರಾ ಗಂಭೀರ ಸ್ಥಿತಿಯಲ್ಲಿದ್ದಾರೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು, ನಾಕಾಬಂಧಿ ಹಾಕಿ ದಾಳಿ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...