alex Certify
ಕನ್ನಡ ದುನಿಯಾ       Mobile App
       

Kannada Duniya

ಜನ ಸಂಖ್ಯಾ ನಿಯಂತ್ರಣಕ್ಕೆ ಕೋರಿ ರಕ್ತದಲ್ಲಿ ಪತ್ರ

ದೇಶದಲ್ಲಿ ಜನ ಸಂಖ್ಯಾ ನಿಯಂತ್ರಣಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಉತ್ತರ ಪ್ರದೇಶದ ಮೀರತ್ ನ ಹಿಂದೂ ಸ್ವಾಭಿಮಾನ್ ಸೇನಾ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಸುಪ್ರೀಂ ಕೋರ್ಟ್ ಗೆ ಕಳುಹಿಸಿಕೊಟ್ಟಿದ್ದಾರೆ.

ಭಾನುವಾರದಂದು ಮೀರತ್ ನ ದೇವಾಲಯವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದಿದ್ದಾರೆಂದು ಹಿಂದೂ ಸ್ವಾಭಿಮಾನ್ ಸೇನಾ ರಾಷ್ಟ್ರೀಯ ಅಧ್ಯಕ್ಷ ಚೇತನ್ ಶರ್ಮಾ ತಿಳಿಸಿದ್ದಾರೆ.

ದೀಪಾವಳಿಯಂದು ದೆಹಲಿ ಮತ್ತು NCR ನಲ್ಲಿ ಪಟಾಕಿ ಸಿಡಿಸುವುದಕ್ಕೆ ನ್ಯಾಯಾಲಯ ನಿಷೇಧ ಹೇರಿದ್ದು, ಅದರಂತೆ ಜನಸಂಖ್ಯಾ ನಿಯಂತ್ರಣಕ್ಕೂ ಕಾನೂನು ಮೂಲಕ ಕ್ರಮ ಕೈಗೊಳ್ಳಲಿ. ಚೀನಾದಲ್ಲಿರುವಂತೆ ಕುಟುಂಬಕ್ಕೆ 2 ಮಕ್ಕಳು ಸಾಕೆಂಬ ನಿಯಮ ಜಾರಿಗೊಳಿಸಲೆಂದು ಚೇತನ್ ಶರ್ಮಾ ಹೇಳಿದ್ದಾರೆ. ರಕ್ತದಲ್ಲಿ ಬರೆದ ಪತ್ರಗಳನ್ನು ಪ್ರಧಾನಿ ಮೋದಿ ಹಾಗೂ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೂ ಕಳುಹಿಸಿಕೊಡುವುದಾಗಿ ಶರ್ಮಾ ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...