alex Certify
ಕನ್ನಡ ದುನಿಯಾ       Mobile App
       

Kannada Duniya

ಎರಡು ಲಾರಿಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ಕಾರು

road-accident-3478ತಮ್ಮ ಮಕ್ಕಳನ್ನು ಕಾಲೇಜಿಗೆ ಸೇರಿಸಲೆಂದು ಪ್ರವೀಣ್ ಎಂಬವರು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ದಾರುಣವಾಗಿ ಸಾವನ್ನಪ್ಪಿದ್ದಾರೆ.

ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕಾಮರೆಡ್ಡಿ ರಾಷ್ಟ್ರೀಯ ಹೆದ್ದಾರಿಯ ಟೆಕ್ರಿಯಾಲ್ ಬಳಿ ಈ ಅಪಘಾತ ಸಂಭವಿಸಿದ್ದು, ಮೊದಲಿಗೆ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಬಂದಿದೆ. ಆಗ ಎದುರಿಗೆ ಬಂದ ಮತ್ತೊಂದು ಲಾರಿ ಅದಕ್ಕೆ ಡಿಕ್ಕಿ ಹೊಡೆದಿದ್ದು, ಇವೆರೆಡರ ಮಧ್ಯೆ ಸಿಲುಕಿದ ಕಾರು ನಜ್ಜುಗುಜ್ಜಾಗಿದೆ. ಇದರಿಂದಾಗಿ ಕಾರಿನಲ್ಲಿದ್ದ ದೇಹಗಳನ್ನು ತೆಗೆಯಲು ಹರಸಾಹಸ ಪಡುವಂತಾಗಿದೆ.

ವೇಲ್ಮರ್ ಗ್ರಾಮದ ಪ್ರವೀಣ್ ಎಂಬವರು ತಮ್ಮ ಮಕ್ಕಳನ್ನು ಹೈದರಾಬಾದಿನ ಕಾಲೇಜಿಗೆ ಸೇರಿಸಲು ಸ್ನೇಹಿತ ಲಕ್ಷ್ಮಣ್ ಎಂಬವರ ಜೊತೆ ತೆರಳುತ್ತಿದ್ದರೆನ್ನಲಾಗಿದೆ. ಭವಿಷ್ಯದ ಕನಸು ಕಾಣುತ್ತಿದ್ದ ಮಕ್ಕಳೂ ಸೇರಿದಂತೆ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯಾವಳಿಗಳು ಸನಿಹದಲ್ಲಿ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆಯನ್ನು ತೋರಿಸುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...