alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಜನ್ ಕೆಲಸ ನಿರ್ವಹಿಸಿದ ಸೆಕ್ಯುರಿಟಿ ಗಾರ್ಡ್

telangana

ಹೈದರಾಬಾದ್: ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ, ಆಡಳಿತ ವರ್ಗ ಏನೆಲ್ಲಾ ಕ್ರಮಕೈಗೊಂಡರೂ, ಪರಿಸ್ಥಿತಿ ಸುಧಾರಿಸಿಲ್ಲ.

ಇದಕ್ಕೆ ಅತ್ಯುತ್ತಮ ಉದಾಹರಣೆ ಎನ್ನಬಹುದಾದ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಆರ್. ಸಿರ್ಸಿಲಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಬರುವುದು ವಿಳಂಬವಾಗಿದ್ದರಿಂದ ಭದ್ರತಾ ಸಿಬ್ಬಂದಿಯೇ ಡಾಕ್ಟರ್ ಕೆಲಸ ಮಾಡಿದ್ದಾನೆ.

ತಲೆಗೆ ಪೆಟ್ಟು ಬಿದ್ದಿದ್ದ ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡಿ, ಹೊಲಿಗೆ ಹಾಕಿದ್ದಾನೆ. ತಲೆಗೆ ಗಾಯಗಳಾದ ಮಹಿಳೆಯೊಬ್ಬರು ಆಸ್ಪತ್ರೆಗೆ ಬಂದಿದ್ದು, ಈ ಸಂದರ್ಭದಲ್ಲಿ ಡ್ಯೂಟಿ ಡಾಕ್ಟರ್ ಇರಲಿಲ್ಲ.

ಇದರಿಂದೇನು ತಲೆ ಕೆಡಿಸಿಕೊಳ್ಳದ ಭದ್ರತಾ ಸಿಬ್ಬಂದಿಯೇ ಆಕೆಗೆ ಚಿಕಿತ್ಸೆ ನೀಡಿ ಹೊಲಿಗೆ ಹಾಕಿದ್ದು, ಇದನ್ನು ಅಲ್ಲಿದ್ದವರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಕ್ರಮಕೈಗೊಳ್ಳಲು ಮುಂದಾಗಿದ್ದು, ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...