alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್‌: ಹರಿಕೃಷ್ಣ ಮೃತ ದೇಹದ ಮುಂದೆ ಸೆಲ್ಫಿ

ಹೈದರಾಬಾದ್‌: ಸೆಲ್ಫಿ ಗೀಳು ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಎಲ್ಲೆಂದರಲ್ಲಿ ಸೆಲ್ಫಿ ತೆಗೆದುಕೊಳ್ಳುವ ಗೀೀಳಿಗೆ ವೈದ್ಯಕೀಯ ಸಿಬ್ಬಂದಿಗಳೂ ಹೊರತಾಗಿಲ್ಲ.

ಆ.29ರಂದು ರಸ್ತೆ ಅಪಘಾತದಲ್ಲಿ ಮೃತಪಟ್ಟ ತೆಲುಗು ಸಿನಿಮಾ ನಟ, ರಾಜಕೀಯ ಮುಖಂಡ ನಂದಮೂರಿ ಹರಿಕೃಷ್ಣ ಅವರ ಮೃತ ದೇಹದ ಮುಂದೆ ಆಸ್ಪತ್ರೆಯ ನೌಕರನೋರ್ವ ಸೆಲ್ಫಿ ತೆಗೆದುಕೊಂಡಿದ್ದಾನೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದ ಹರಿಕೃಷ್ಣ ದೇಹವನ್ನು ಕಾಮಿನೇನಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಹರಿಕೃಷ್ಣ ಮೃತದೇಹವನ್ನು ಹಿನ್ನೆಲೆಯಾಗಿರಿಸಿಕೊಂಡು ವಾರ್ಡ್‌ ಬಾಯ್‌ ಹಾಗೂ ಮೂವರು ಮಹಿಳಾ ಸಿಬ್ಬಂದಿಗಳು ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಆಂಧ್ರಪ್ರದೇಶದ ಮಾಜಿ ಸಚಿವರಾಗಿದ್ದ ಹರಿಕೃಷ್ಣ, ನಲ್ಗೊಂಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...