alex Certify
ಕನ್ನಡ ದುನಿಯಾ       Mobile App
       

Kannada Duniya

”ಬಿಲ್ ಪಾವತಿಯಾಗಿಲ್ಲವೆಂದ್ರೂ ರೋಗಿಯನ್ನು ಡಿಸ್ಜಾರ್ಜ್ ಮಾಡಿ”

radar-4

ರೋಗಿಗಳ ಬಿಲ್ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ರೋಗಿಗಳು ಆಸ್ಪತ್ರೆ ಬಿಲ್ ಪಾವತಿ ಮಾಡಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಆಸ್ಪತ್ರೆಯಲ್ಲಿ ಇಟ್ಟುಕೊಳ್ಳುವಂತಿಲ್ಲ ಎಂದು ಕೋರ್ಟ್ ತಿಳಿಸಿದೆ.

ರಾಷ್ಟ್ರರಾಜಧಾನಿ ದೆಹಲಿಯ ಖಾಸಗಿ ಆಸ್ಪತ್ರೆಯೊಂದು ಬಿಲ್ ಪಾವತಿ ಮಾಡಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬರ ತಂದೆಯನ್ನು ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡಿಲ್ಲ. ನ್ಯಾಯ ಕೋರಿ ರೋಗಿ ಮಗ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಸ್ಪತ್ರೆ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದೆ. ಬಿಲ್ ಪಾವತಿ ಮಾಡಿಲ್ಲ ಎನ್ನುವ ಕಾರಣಕ್ಕೆ ರೋಗಿಯನ್ನು ಆಸ್ಪತ್ರೆಯಲ್ಲಿಯೇ ಬಂಧಿ ಮಾಡುವುದು ಸೂಕ್ತ ಕ್ರಮವಲ್ಲ ಎಂದಿದೆ.

ಬಿಲ್ ವಿಚಾರಕ್ಕೆ ರೋಗಿಯನ್ನು ಒತ್ತೆಯಾಳಾಗಿಟ್ಟುಕೊಳ್ಳಬೇಡಿ. ರೋಗಿಯ ಡಿಸ್ಜಾರ್ಜ್ ಗೆ ಎಲ್ಲ ತಯಾರಿ ನಡೆಸಿ. ಮಗನಿಗೆ ಈ ಬಗ್ಗೆ ತಿಳಿಸಿ ಎಂದು ಆಸ್ಪತ್ರೆಗೆ ಕೋರ್ಟ್ ಸೂಚನೆ ನೀಡಿದೆ. ಮಧ್ಯ ಪ್ರವೇಶ ಮಾಡಿದ ಸರ್ ಗಂಗಾ ರಾಮ್ ಆಸ್ಪತ್ರೆ ವೈದ್ಯರು, ರೋಗಿ ಸಂಬಂಧಿಕರು ವೈದ್ಯಕೀಯ ನಿಯಮಕ್ಕೆ ವಿರುದ್ಧವಾಗಿ ರೋಗಿಯನ್ನು ಕರೆದುಕೊಂಡು ಹೋಗ್ತಿದ್ದಾರೆಂದು ಕೋರ್ಟ್ ಗೆ ತಿಳಿಸಿದ್ದಾರೆ. ಕುಟುಂಬಸ್ಥರು ರೋಗಿಯನ್ನು ಕರೆದೊಯ್ಯುತ್ತೇನೆಂದಾಗ ತಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...