alex Certify
ಕನ್ನಡ ದುನಿಯಾ       Mobile App
       

Kannada Duniya

ಓವರ್ ಟೇಕ್ ವೇಳೆ ಬಸ್ ಪಲ್ಟಿಯಾಗಿ ಐವರು ಸಾವು

ಹೊಸೂರು: ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ, ಹೊಸೂರು ಸಮೀಪದ ಸುಳಗಿರಿ ಬಳಿ ನಡೆದಿದೆ.

ಕಾರ್ ಓವರ್ ಟೇಕ್ ಮಾಡಲು ಹೋಗಿ ವೇಗವಾಗಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಓರ್ವ ಮಹಿಳೆ, ನಾಲ್ವರು ಪುರುಷರು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಸುಳಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...