alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಪೊಲೀಸರನ್ನು ರಕ್ಷಿಸಿದ ಕ್ರೇನ್ ಚಾಲಕ

ಉತ್ತರ ಪ್ರದೇಶದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ನೋ ಸೇರಿದಂತೆ ನಾನಾ ಕಡೆಗಳಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಜನ ಜೀವನ ಅತಂತ್ರವಾಗಿದೆ. ಜನವಸತಿ ಪ್ರದೇಶಕ್ಕೆ ಪ್ರವಾಹದ ನೀರು ನುಗ್ಗುತ್ತಿರುವ ಪರಿಣಾಮ ಅನೇಕ ಪ್ರಾಣಹಾನಿ ಸಂಭವಿಸಿದೆ.

ಕಾನ್ಫುರದಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಪೊಲೀಸರನ್ನ ಕ್ರೇನ್ ಮೂಲಕ ರಕ್ಷಿಸಲಾಗಿದೆ. ಕ್ರೇನ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಜೀಪ್ ನಲ್ಲಿದ್ದ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬರೇಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ 34 ಮನೆಗಳು ಕುಸಿದು ಬಿದ್ದ ಪರಿಣಾಮ ಜನರು ಬೀದಿ ಪಾಲಾಗಿದ್ದಾರೆ. ಉತ್ತರ ಪ್ರದೇಶದ 14 ಜಿಲ್ಲೆಗಳು ಮಳೆಯಿಂದಾಗಿ ಹೆಚ್ಚಿನ ನಷ್ಟ ಸಂಭವಿಸಿದೆ. ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಇದುವರೆಗೂ ಮಳೆಯಿಂದಾಗಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಲಕ್ನೋದಲ್ಲಿ ಮಳೆಯಿಂದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅಲ್ಲಿ ನಾಲ್ಕು ಮಂದಿಯನ್ನ ರಕ್ಷಿಸಲಾಗಿದೆ.

ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನಸಾಮಾನ್ಯರ ನೆರವಿಗೆ ಕೂಡಲೇ ಧಾವಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗೋದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...