alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲೇ ಬಂದೆರಗಿತ್ತು ಸಾವು

ಹೈದರಾಬಾದ್: ಹೃದಯಾಘಾತದಿಂದ 6 ನೇ ತರಗತಿ ವಿದ್ಯಾರ್ಥಿ ಶಾಲೆಯಲ್ಲೇ ಮೃತಪಟ್ಟ ದಾರುಣ ಘಟನೆ ಹೈದರಾಬಾದ್ ನ ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.

ನಡೆರ್ಗುಲಾದಲ್ಲಿರುವ ಶಾಲೆಯ ವಿದ್ಯಾರ್ಥಿ ಜಿ. ಆದರ್ಶ್ ಮುದಿರಾಜ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತರಗತಿಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದನ್ನು ಗಮನಿಸಿದ ಶಾಲೆಯ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದು, ಈ ವೇಳೆಗಾಗಲೇ ಆತ ಮೃತಪಟ್ಟಿದ್ದನೆನ್ನಲಾಗಿದೆ.

ಶಾಲೆಯ ಆಡಳಿತಾಧಿಕಾರಿ ಬಾಲರಾಜ್, ಸಿ.ಸಿ. ಕ್ಯಾಮೆರಾ ದೃಶ್ಯಾವಳಿಗಳನ್ನು ಪೊಲೀಸರಿಗೆ ಕೊಟ್ಟಿದ್ದೇವೆ. ಬಾಲಕನ ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದಾರೆ.

ಸಿ.ಆರ್.ಪಿ.ಸಿ. ಸೆಕ್ಷನ್ 174 (ಸಂಶಯಾಸ್ಪದ ಮರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ಅನಾರೋಗ್ಯದ ಕಾರಣ ಹುಡುಗನು ಸಾವನ್ನಪ್ಪಿದ್ದಾನೆಂದು ನಾವು ಭಾವಿಸುತ್ತೇವೆ ಎಂದು ಆದಿಬಾತ್ಲಾ ಇನ್ಸ್ ಪೆಕ್ಟರ್ ಗೋವಿಂದ ರೆಡ್ಡಿ ಹೇಳಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತನಿಖೆಯ ಬಳಿಕ ಬಾಲಕ ಸಾವಿನ ಕಾರಣ ತಿಳಿದು ಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...