alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಸಹೋದ್ಯೋಗಿಗೇ ದಂಡ ಹಾಕಿದ ಪೊಲೀಸರು !

hydar fine

ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಸಂಚಾರ ದಟ್ಟಣೆಯೂ ಹೆಚ್ಚಾಗಿದೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, ಪೊಲೀಸರಿಗೆ ಕೆಲಸ ಮಾಡುವುದೇ ಸವಾಲಾಗಿದೆ. ಆದರೆ, ಹೈದರಾಬಾದ್ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ನಿಷ್ಣಾತರು.

ಸಾರಿಗೆ ವ್ಯವಸ್ಥೆ ಸುಧಾರಿಸಲು ಹಲವಾರು ಆಧುನಿಕ ಕ್ರಮಗಳನ್ನು ಅಳವಡಿಸಿಕೊಂಡಿದ್ದ ಹೈದರಾಬಾದ್ ಸಂಚಾರಿ ಪೊಲೀಸರು, ಸಾರ್ವಜನಿಕರೊಂದಿಗೆ ಪೊಲೀಸರು ಯಾವ ರೀತಿ ವರ್ತಿಸುತ್ತಾರೆ ಎಂಬುದನ್ನು ತಿಳಿಯಲು ಅವರ ಶರ್ಟ್ ಬಟನ್ ಗಳಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದರು. ಇದೀಗ, ಮಹಿಳಾ ಸಹೋದ್ಯೋಗಿಗೇ ದಂಡ ವಿಧಿಸುವ ಮೂಲಕ ಕರ್ತವ್ಯನಿಷ್ಠೆ ಮೆರೆದಿದ್ದಾರೆ. ಹೆಲ್ಮೆಟ್ ಧರಿಸದ ಕಾರಣಕ್ಕೆ ಕಳೆದ 10 ದಿನಗಳ ಅವಧಿಯಲ್ಲಿ ಒಟ್ಟು 110 ಪೊಲೀಸರಿಗೆ ದಂಡ ವಿಧಿಸಿದ್ದಾರೆ.

ಮಾತ್ರವಲ್ಲ, ಕಾರಣ ಕೇಳಿ, ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದು ಸಂಗತಿಯೆಂದರೆ, ಕಳೆದ ಗುರುವಾರ ಒಂದೇ ದಿನ ಬರೋಬ್ಬರಿ 10 ಸಾವಿರ ಪ್ರಕರಣ ದಾಖಲಾಗಿವೆ. ಈ ಮೂಲಕ ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಹೈದರಾಬಾದ್ ಪೊಲೀಸರು ಗಮನಸೆಳೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...