alex Certify
ಕನ್ನಡ ದುನಿಯಾ       Mobile App
       

Kannada Duniya

ಏಕ ಕಂತಿನಲ್ಲಿ ಸಾಲ ತೀರಿಸ್ತಾರಂತೆ ವಿಜಯ್ ಮಲ್ಯ

vijaymallyanew_afp

ಸಾಲದ ಸುಳಿಯಲ್ಲಿ ಸಿಲುಕಿ ಬಂಧನದ ಭೀತಿ ಎದುರಿಸುತ್ತಿರುವ ಮದ್ಯದ ದೊರೆ ವಿಜಯ್ ಮಲ್ಯ ಇದೀಗ ತಾವು ಸಾಲ ನೀಡಿದವರಿಗೆ ಹೆಚ್ಚುವರಿ ಪಾವತಿ ಮೂಲಕ ಏಕ ಕಂತಿನಲ್ಲಿ ಸಾಲ ತೀರಿಸಲು ಪ್ರಯತ್ನಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಯ, ತಮ್ಮನ್ನು ‘ಸಾಲಗಾರ’ ಎಂದು ಕರೆಯುವ ಮೂಲಕ ಮತ್ತು ನನ್ನ ವಿರುದ್ಧ ತಪ್ಪು ಮಾಹಿತಿ ರವಾನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಾನು ಎಲ್ಲಿಗೂ ಓಡಿ ಹೋಗಿಲ್ಲ. ಅಷ್ಟೇ ಅಲ್ಲ, ಸಾಲ ಮರುಪಾವತಿ ವಿಚಾರದಲ್ಲಿ ತನಿಖಾ ಸಂಸ್ಥೆಗಳು ತನಿಖೆ ನಡೆಸುವ ವೇಳೆ ಸಂಪೂರ್ಣವಾಗಿ ಸಹಕರಿಸುತ್ತೇನೆ ಎಂದು ತಿಳಿಸಿದ್ದಾರೆ.

ವಿಶೇಷವೆಂದರೆ ಕಳೆದೆರಡು ದಿನಗಳ ಹಿಂದಷ್ಟೇ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ ಬ್ಯಾಂಕುಗಳ ಒಕ್ಕೂಟ ಬೆಂಗಳೂರಿನ ಸಾಲ ವಸೂಲಾತಿ ನ್ಯಾಯಾಧಿಕರಣದಲ್ಲಿ ಮಲ್ಯ ಅವರನ್ನು ಬಂಧನಕ್ಕೆ ಮನವಿ ಮಾಡಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹೈಕೋರ್ಟ್ ಮೆಟ್ಟಿಲೇರಿತ್ತು ಎಂಬುದನ್ನಿಲ್ಲಿ ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...