alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯ ‘ನಿವೃತ್ತಿ’ ಕುರಿತು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದೇನು…?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲವೆಂದು ಹೇಳುವ ಮೂಲಕ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅಚ್ಚರಿ ಮೂಡಿಸಿದ್ದರಲ್ಲದೆ ಅವರ ಈ ದಿಢೀರ್ ಘೋಷಣೆ ಬಿಜೆಪಿ ವಲಯದಲ್ಲೂ ತಳಮಳ ಮೂಡಿಸಿತ್ತು.

ಆದರೆ ಈಗ ಈ ಕುರಿತು ಸುಷ್ಮಾ ಸ್ವರಾಜ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಸಭಾ ಸದಸ್ಯ ಸ್ವಪನ್ ದಾಸ್ ಗುಪ್ತಾ ಮಾಡಿರುವ ಟ್ವೀಟ್ ಗೆ ಪ್ರತ್ಯುತ್ತರಿಸಿರುವ ಸುಷ್ಮಾ ಸ್ವರಾಜ್, ತಮ್ಮ ನಿರ್ಧಾರದ ಹಿಂದಿನ ಕಾರಣವನ್ನೂ ತಿಳಿಸಿದ್ದಾರೆ.

ತಮ್ಮ ಟ್ವೀಟ್ ನಲ್ಲಿ ಸ್ವಪನ್ ದಾಸ್ ಗುಪ್ತಾ, ಆರೋಗ್ಯ ಕಾರಣಗಳಿಗಾಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾತ್ರಕ್ಕೆ ರಾಜಕೀಯದಿಂದಲೇ ನಿವೃತ್ತಿ ಆಗುತ್ತಾರೆ ಎಂದಲ್ಲ. ಲೋಕಸಭೆಯಲ್ಲಿ ಇಲ್ಲದೇ ಇದ್ದರೂ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಮಾಡಲು ಹಲವು ಅವಕಾಶಗಳಿವೆ ಎಂದಿದ್ದರು.

ಇದಕ್ಕೆ ಉತ್ತರಿಸಿರುವ ಸುಷ್ಮಾ ಸ್ವರಾಜ್, ನೀವು ಹೇಳಿರುವುದು ಸರಿಯಾಗಿದೆ ಸ್ವಪನ್. ಆರೋಗ್ಯ ಕಾರಣಗಳಿಂದಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲವೆಂದು ತಿಳಿಸಿದ್ದಾರೆ. ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯಲು ಮುಂದಾಗಿರುವ ಸುಷ್ಮಾ ಸ್ವರಾಜ್ ಅವರನ್ನು ಬಿಜೆಪಿ, ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...