alex Certify
ಕನ್ನಡ ದುನಿಯಾ       Mobile App
       

Kannada Duniya

ಶನಿವಾರ ಶಬರಿಮಲೆಗೆ ಹೋಗ್ತಾರಂತೆ ತೃಪ್ತಿ ದೇಸಾಯಿ – ನಾವು ಬಿಡಲ್ಲ ಅಂತಿದ್ದಾರೆ ರಾಹುಲ್ ಈಶ್ವರ್

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಶನಿವಾರ ಮತ್ತೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಏಕೆಂದರೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರ ವಿರೋಧದ ನಡುವೆಯೂ ದೇವಸ್ಥಾನಕ್ಕೆ ಹೋಗಿ ಅಯ್ಯಪ್ಪ ದರ್ಶನ ಪಡೆಯುವುದಾಗಿ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ತೃಪ್ತಿ ದೇಸಾಯಿ ಘೋಷಿಸಿದ್ದಾರೆ.

ನ. 17ರಂದು ನಾವು 6 ಜನ ಮಹಿಳೆಯರು ದೇವಸ್ಥಾನಕ್ಕೆ ಪ್ರವೇಶಿಸಲು ನಿರ್ಧರಿಸಿದ್ದು, ಶುಕ್ರವಾರವೇ ಕೇರಳಕ್ಕೆ ಬರಲಿದ್ದೇವೆ. ನಾವು ಕೇರಳಕ್ಕೆ ಬಂದಾಗಿನಿಂದ ವಾಪಸ್ ಹೋಗುವವರೆಗೂ ನಮಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ಅವರು ತೃಪ್ತಿ ದೇಸಾಯಿ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದು, ನಾವು ಯಾವುದೇ ಮಹಿಳೆಗೆ ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...