alex Certify
ಕನ್ನಡ ದುನಿಯಾ       Mobile App
       

Kannada Duniya

ಅನುರಾಗ್ ತಿವಾರಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್

up-anuragtಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿಯವರ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಸಾವಿಗೂ ಮುನ್ನ ಅನುರಾಗ್ ತಿವಾರಿಯವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ ಎಂಬ ಅಂಶ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ.

2007 ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿಯವರ ಮೃತ ದೇಹ ಉತ್ತರ ಪ್ರದೇಶ ರಾಜಧಾನಿ ಲಖ್ನೋದಿಂದ 130 ಕಿಲೋ ಮೀಟರ್ ದೂರದಲ್ಲಿರುವ ಹಜರತ್ ಗಂಜ್ ಗೆಸ್ಟ್ ಹೌಸ್ ಬಳಿ ಪತ್ತೆಯಾಗಿತ್ತು.

ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಅನುರಾಗ್ ತಿವಾರಿಯವರ ಕುಟುಂಬ, ಉನ್ನತ ತನಿಖೆಗೆ ಆಗ್ರಹಿಸಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಕರಣವನ್ನು ಸಿಬಿಐಗೆ ವಹಿಸಲು ಮುಂದಾಗಿದ್ದಾರೆ. ಈ ಮಧ್ಯೆ ಈಗ ಬಹಿರಂಗಗೊಂಡಿರುವ ಮರಣೋತ್ತರ ಪರೀಕ್ಷಾ ವರದಿ ಅನುರಾಗ್ ತಿವಾರಿಯವರನ್ನು ಹತ್ಯೆ ಮಾಡಲಾಗಿದೆ ಎಂಬ ಕುಟುಂಬಸ್ಥರ ಆರೋಪವನ್ನು ಪುಷ್ಟೀಕರಿಸುತ್ತಿದೆ.

ತಿವಾರಿ ಸಾವಿನ ಕುರಿತಾಗಿ ಈಗಾಗಲೇ ಎಸ್.ಐ.ಟಿ. ತನಿಖೆ ನಡೆಯುತ್ತಿದ್ದು, ಅನುರಾಗ್ ತಿವಾರಿ, ಬಹುದೊಡ್ಡ ಅವ್ಯವಹಾರ ಬಯಲಿಗೆಳೆಯಲು ಸಿದ್ಧತೆ ನಡೆಸಿದ್ದರಿಂದ ಜೀವ ಬೆದರಿಕೆ ಇತ್ತು. ಆತನನ್ನು ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಸಹೋದರ ಮಯಾಂಕ್ ತಿವಾರಿ ಆರೋಪಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...