alex Certify
ಕನ್ನಡ ದುನಿಯಾ       Mobile App
       

Kannada Duniya

ಕಾನೂನುಬಾಹಿರವಾಗಿ ಬಂಧನಕ್ಕೊಳಪಡಿಸಿದ್ದ ಐಎಎಸ್ ಅಧಿಕಾರಿಗೆ ಜೈಲು

ಹೈದರಾಬಾದ್: ಐಎಎಸ್ ಅಧಿಕಾರಿಯೊಬ್ಬರಿಗೆ ಒಂದು ತಿಂಗಳ ಕಾಲ ಜೈಲುಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ನಿವೃತ್ತ ಅಧಿಕಾರಿಯೊಬ್ಬರನ್ನು ಕಾನೂನುಬಾಹಿರವಾಗಿ ಬಂಧಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ಕೆ. ಶಿವಕುಮಾರ್ ನಾಯ್ಡು ಎಂಬುವವರಿಗೆ ಹೈದರಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ನವೀನ್ ಕುಮಾರ್ ನೇತೃತ್ವದ ಪೀಠ 1 ತಿಂಗಳ ಜೈಲುಶಿಕ್ಷೆ ವಿಧಿಸಿದೆ.

ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದ ಎ. ಬುಚಯ್ಯ ಎಂಬವರು ಮೆಹಬೂಬ್ ನಗರದ ತಮ್ಮ ಜಮೀನಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲು ಮುಂದಾಗಿದ್ದರು. ಇದಕ್ಕೆ ಮೆಹಬೂಬ್‍ ನಗರದ ಜಂಟಿ ಆಯುಕ್ತರಾಗಿದ್ದ ಶಿವಕುಮಾರ್ ನಾಯ್ಡು, 2017 ಜುಲೈ 1ರಂದು ಕಾನೂನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಆರೋಪದಲ್ಲಿ ತಡೆಯಾಜ್ಞೆ ನೀಡಿದ್ದರು. ಅಲ್ಲದೇ ಬುಚಯ್ಯ ಅವರನ್ನು ಎರಡು ತಿಂಗಳ ಬಂಧನಕ್ಕೆ ಇನ್ಸ್ ಪೆಕ್ಟರ್ ಗೆ ಸೂಚನೆ ನೀಡಿದ್ದರು. ಜಾಮೀನಿನ ಮೇಲೆ ಹೊರ ಬಂದ ಬುಚಯ್ಯ, ಆಯುಕ್ತರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿರುವ ನ್ಯಾಯಾಲಯ ನಿವೃತ್ತ ಅಧಿಕಾರಿ ಜೊತೆ ಅನುಚಿತ ವರ್ತನೆ ಹಾಗೂ ಕಾನೂನುಬಾಹಿರ ಬಂಧನ ಆರೋಪದ ಮೇಲೆ ಐಎಎಸ್ ಅಧಿಕಾರಿ ಶಿವಕುಮಾರ್ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...