alex Certify
ಕನ್ನಡ ದುನಿಯಾ       Mobile App
       

Kannada Duniya

ಕುಲಭೂಷಣ್ ಜಾದವ್ ಗಲ್ಲು ಶಿಕ್ಷೆಗೆ ತಡೆಯಾಜ್ಞೆ

kulbhushan-jadhav_650x400_51494826156

ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಯಾದವ್ ಗಲ್ಲು ಶಿಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಅಭೂತ ಪೂರ್ವ ಗೆಲುವು ಸಿಕ್ಕಿದೆ. ಅಂತರಾಷ್ಟ್ರೀಯ ಕೋರ್ಟ್ ನಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಕುಲಭೂಷಣ್ ಜಾದವ್ ಗೆ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ಕೋರ್ಟ್ (ಐಸಿಜೆ) ತಡೆ ನೀಡಿದೆ.

ಪಾಕಿಸ್ತಾನದ ಸೇನಾ ಕೋರ್ಟ್ ಕುಲಭೂಷಣ್ ಜಾದವ್ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾದವ್ ಗೆ ವಿಧಿಸಿದ್ದ ಗಲ್ಲು ಶಿಕ್ಷೆ ತೀರ್ಪನ್ನು ಪ್ರಶ್ನಿಸಿ ಭಾರತ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ಮೇ15ರಂದು ಈ ಪ್ರಕರಣದ ವಿಚಾರಣೆಯನ್ನು ಅಂತರಾಷ್ಟ್ರೀಯ ನ್ಯಾಯಾಲಯ ಕೈಗೆತ್ತಿಕೊಂಡಿತ್ತು. ಈ ವೇಳೆ ಪಾಕಿಸ್ತಾನ ತನ್ನ ವಾದ ಮಂಡಿಸಿತ್ತು. ಆದ್ರೆ ಪಾಕ್ ವಾದವನ್ನು ತಿರಸ್ಕರಿಸಿದ ಕೋರ್ಟ್ ಭಾರತದ ಮನವಿಯನ್ನು ಪುರಸ್ಕರಿಸಿದೆ. ಗುರುವಾರ ಮಧ್ಯಂತರ ತೀರ್ಪು ನೀಡಿದೆ. ಅಂತರಾಷ್ಟ್ರೀಯ ನ್ಯಾಯಾಲಯ ಅಂತಿಮ ತೀರ್ಪು ನೀಡುವವರೆಗೂ ಕುಲಭೂಷಣ್ ಜಾದವ್ ಗೆ ಗಲ್ಲು ಶಿಕ್ಷೆ ನೀಡಬಾರದೆಂದು ಪಾಕಿಸ್ತಾನಕ್ಕೆ ಆದೇಶ ನೀಡಿದೆ. ಗಲ್ಲುಶಿಕ್ಷೆ ಜಾರಿಯಾಗದಂತೆ ಪಾಕಿಸ್ತಾನ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋನಿ ಅಬ್ರಹಂ ಪೀಠ ತೀರ್ಪು ನೀಡಿದೆ.

 

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...