alex Certify
ಕನ್ನಡ ದುನಿಯಾ       Mobile App
       

Kannada Duniya

ಆಸಿಡ್ ದಾಳಿಗೊಳಗಾದವರಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸಿದ ದೆಹಲಿ ಸರ್ಕಾರ

ಆಸಿಡ್ ದಾಳಿಗೊಳಗಾದವರ ಕುರಿತಂತೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಂತ್ರಸ್ಥರು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಅವರಿಂದ ಯಾವುದೇ ಶುಲ್ಕ ಪಡೆಯದೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಹೇಳಲಾಗಿದೆಯಲ್ಲದೇ ಇದರ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದು, ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ ಸಂತ್ರಸ್ಥರು ಯಾವುದೇ ದಾಖಲೆಗಳನ್ನು ಕೊಂಡೊಯ್ಯಬೇಕಾಗಿಲ್ಲ. ಘಟನೆ ದೆಹಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರೆ ಅಂತವರಿಗೆ ಖಾಸಗಿ ನರ್ಸಿಂಗ್ ಹೋಂ ಸೇರಿದಂತೆ ಎಲ್ಲ ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ನೀಡಲು ಆದೇಶಿಸಲಾಗಿದೆ ಎಂದಿದ್ದಾರೆ.

ಆಸಿಡ್ ದಾಳಿಗೊಳಗಾದವರು ಚಿಕಿತ್ಸೆಗೆ ಬಂದ ವೇಳೆ ಕೂಡಲೇ ಚಿಕಿತ್ಸೆ ಆರಂಭಿಸಬೇಕು. ಬಳಿಕ ಆಸ್ಪತ್ರೆ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗೆ ಆಸ್ಪತ್ರೆ ಮುಖ್ಯಸ್ಥರು ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ. ಡಿಸ್ಚಾರ್ಜ್ ವೇಳೆ ಸಂತ್ರಸ್ಥರಿಂದ ಯಾವುದೇ ಬಿಲ್ ಪಡೆಯಬಾರದು. ಇದರ ವೆಚ್ಚದ ವಿವರವನ್ನು ಸರ್ಕಾರಕ್ಕೆ ಸಲ್ಲಿಸಿದರೆ ಪಾವತಿಸಲಾಗುವುದು ಎಂದು ಹೇಳಲಾಗಿದೆ. ಈ ಹಿಂದೆಯೂ ದೆಹಲಿ ಸರ್ಕಾರ, ರಸ್ತೆ ಅಪಘಾತಗಳಾದ ಸಂದರ್ಭದಲ್ಲಿ ಅಂತವರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕೆಂದು ಆದೇಶ ಹೊರಡಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...