alex Certify
ಕನ್ನಡ ದುನಿಯಾ       Mobile App
       

Kannada Duniya

ಪಾನ ನಿಷೇಧವಿರೋ ಬಿಹಾರದಲ್ಲಿ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಸಂಸದನ ಪುತ್ರ

ಕಳೆದ ಎರಡು ವರ್ಷಗಳಿಂದ ಬಿಹಾರದಲ್ಲಿ ಪಾನ ನಿಷೇಧ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಕಾನೂನನ್ನು ರೂಪಿಸಲಾಗಿದೆ. ಆದರೂ ಪಾನ ನಿಷೇಧ ಸಮರ್ಪಕವಾಗಿ ಅನುಷ್ಟಾನಗೊಂಡಿಲ್ಲವೆಂಬ ಟೀಕೆ ವಿಪಕ್ಷಗಳಿಂದ ಕೇಳಿ ಬರುತ್ತಿದೆ.

ಇದೀಗ ಬಿಹಾರದ ಪ್ರಭಾವಿ ಸಂಸದರೊಬ್ಬರ ಪುತ್ರ ಸ್ನೇಹಿತನೊಂದಿಗೆ ಮದ್ಯ ಸೇವಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಗಯಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹರಿ ಮಾಂಜಿಯವರ ಪುತ್ರ ರಾಹುಲ್ ಕುಮಾರ್ ಮಾಂಜಿ ಸ್ನೇಹಿತನ ಜೊತೆ ಮದ್ಯ ಸೇವಿಸಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಬ್ಬರನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೇಳೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದರ ಮಧ್ಯೆ ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ಹರಿ ಮಾಂಜಿ, ಗಯಾ ಕ್ಷೇತ್ರದ ನಮಾ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ವಹಿವಾಟು ನಡೆಯುತ್ತಿದೆ ಎಂದು ತಾವು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳುವ ಬದಲು ವಿನಾಕಾರಣ ತಮ್ಮ ಪುತ್ರನನ್ನು ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ. ವಿಪಕ್ಷ ನಾಯಕರು, ಬಿಹಾರದಲ್ಲಿ ಪಾನ ನಿಷೇಧ ಒಂದು ಪ್ರಹಸನದಂತಾಗಿದೆ. ರಾಜ್ಯದೆಲ್ಲೆಡೆ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...