alex Certify
ಕನ್ನಡ ದುನಿಯಾ       Mobile App
       

Kannada Duniya

ಮನೋಹರ್ ಪರಿಕ್ಕರ್ ಮತ್ತೆ ಗೋವಾ ಸಿ.ಎಂ.?

parike

ಪಣಜಿ: ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ಮತ್ತೆ ಗೋವಾ ಮುಖ್ಯಮಂತ್ರಿಯಾಗಲಿದ್ದಾರೆ.

ಗೋವಾದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಕಾರಣ, ಬಿ.ಜೆ.ಪಿ., ಸರ್ಕಾರ ರಚನೆಗೆ ಮುಂದಾಗಿದ್ದು, ಬೇರೆ ಪಕ್ಷಗಳು ಮತ್ತು ಪಕ್ಷೇತರರ ಬೆಂಬಲ ಕೇಳಿದೆ.

40 ಸ್ಥಾನಗಳ ಗೋವಾ ವಿಧಾನಸಭೆಯಲ್ಲಿ ಬಹುಮತಕ್ಕೆ 21 ಶಾಸಕರ ಬೆಂಬಲ ಬೇಕಿದೆ. ಗೋವಾ ಫರ್ವರ್ಡ್ ಪಾರ್ಟಿಯ 3, ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷ 3, ಬಿ.ಜೆ.ಪಿ 13 ಹಾಗೂ ಪಕ್ಷೇತರ ಶಾಸಕರೊಬ್ಬರ ಬೆಂಬಲದೊಂದಿಗೆ ಮನೋಹರ್ ಪರಿಕ್ಕರ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಶಾಸಕರು ನಿರ್ಣಯ ಕೈಗೊಂಡಿದ್ದಾರೆ.

ಶಾಸಕರ ತೀರ್ಮಾನದ ಬಳಿಕ ಬೆಂಬಲ ಇರುವ ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಮನೋಹರ್ ಪರಿಕ್ಕರ್, ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...