alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಹೈದರಾಬಾದ್ ನಲ್ಲಿ ತೆಲಂಗಾಣ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹೆಚ್ಚು ದಿನ ಆಡಳಿತ ನಡೆಸುವುದಿಲ್ಲ, ಹೀಗಾಗಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಕಾರಣಕ್ಕೆ ಕಾಂಗ್ರೆಸ್ ಜನತಾದಳದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಆದರೆ ಇದು ಹೆಚ್ಚು ಕಾಲ ನಡೆಯುವುದಿಲ್ಲ ಹಾಗಾಗಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಅದು ಸಾಧ್ಯವಾಗದಿದ್ದಲ್ಲಿ ಮಧ್ಯಂತರ ಚುನಾವಣೆ ಅನಿವಾರ್ಯವಾಗಲಿದೆ ಎಂದು ಮುರಳೀಧರ ರಾವ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...