alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಾದ್ಯಂತ ಇಂಟರ್ ನೆಟ್ ಸೇವೆ ಸ್ಥಗಿತ

jk-net

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಇಂಟರ್ ನೆಟ್ ಸೇವೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ.

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಸಬ್ಜಾರ್ ಬಟ್ ನನ್ನು ಸೇನೆ ಹತ್ಯೆ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ಜೋರಾಗಿದೆ.

ಸೋಷಿಯಲ್ ಮೀಡಿಯಾಗಳನ್ನು ಬಳಸಿಕೊಂಡು ಪ್ರಚೋದನೆ ನೀಡಲಾಗುತ್ತಿದ್ದು, ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಈ ಹಿನ್ನಲೆಯಲ್ಲಿ ಪರಿಸ್ಥಿತಿ ಹತೋಟಿಗೆ ತರುವ ಉದ್ದೇಶದಿಂದ ಸರ್ಕಾರ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

ಹಿಜ್ಬುಲ್ ಕಮಾಂಡರ್ ಆಗಿದ್ದ ಬುರ್ಹಾನ್ ವಾನಿ ಹತ್ಯೆಯ ಬಳಿಕ ಆತನ ಆಪ್ತನಾಗಿದ್ದ ಸಬ್ಜಾರ್ ಬಟ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದ.

ಸೇನೆ ನಡೆಸಿದ್ದ ಕಾರ್ಯಾಚರಣೆಯಲ್ಲಿ ಬಟ್ ನನ್ನು ಹತ್ಯೆ ಮಾಡಲಾಗಿದ್ದು, ಘಟನೆಯ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಜೋರಾಗತೊಡಗಿದೆ.

ಜಾಲತಾಣಗಳ ಮೂಲಕ ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿರುವುದರಿಂದ ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...