alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಲೈಂಗಿಕ ಕಾರ್ಯಕರ್ತೆಯರ ದುರಂತ ಸಾವು

ಪೊಲೀಸರ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಮುಂಬೈನಲ್ಲಿ ಇಬ್ಬರು ಲೈಂಗಿಕ ಕಾರ್ಯಕರ್ತೆಯರು ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಡಿ ಬಿ ಮಾರ್ಗ್ ನಲ್ಲಿರೋ ಓಂ ಬಿಲ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.

ರಾತ್ರಿ 10.30ರ ವೇಳೆಗೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಪೊಲೀಸರು ಗ್ರೌಂಡ್ ಫ್ಲೋರ್ ಗೆ ಬಂದು ಚೆಕಿಂಗ್ ಶುರು ಮಾಡ್ತಿದ್ದಂತೆ ಮೇಲಿನ ಮಹಡಿಯಲ್ಲಿದ್ದ ವೇಶ್ಯೆಯರು ಗಾಬರಿಗೊಂಡಿದ್ರು. ಅಲ್ಲಿಂದ ತಪ್ಪಿಸಿಕೊಳ್ಳಲು ಕಸರತ್ತು ಮಾಡಿದ್ದಾರೆ.

ಇಬ್ಬರು ಮಹಿಳೆಯರು ಮೂರನೇ ಮಹಡಿಯ ಕಿಟಕಿ ಮೂಲಕ ಹಗ್ಗ ಇಳಿಬಿಟ್ಟು, ಕಟ್ಟಡದಿಂದ ಕೆಳಕ್ಕೆ ಇಳಿಯಲು ಯತ್ನಿಸುತ್ತಿದ್ರು. ಈ ವೇಳೆ ಕೈಜಾರಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರು ಪಶ್ಚಿಮ ಬಂಗಾಳ ಮೂಲದವರು ಅಂತಾ ಪೊಲೀಸರು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...