alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಟಿಮ್ ಕುಕ್

Tim-Cook-reutersಆಪಲ್ ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿಮ್ ಕುಕ್, ಭಾರತ ಪ್ರವಾಸ ಕೈಗೊಂಡಿದ್ದು, ಈ ವೇಳೆ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರಿಗೆ ಆಪಲ್ ಕಂಪನಿಯ ಭಾರತದ ಮುಖ್ಯಸ್ಥ ಸಂಜಯ್ ಕೌಲ್ ಸಾಥ್ ನೀಡಿದ್ದಾರೆ.

ಟಿಮ್ ಕುಕ್, ಸಿದ್ದಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಮುಖಾಮುಖಿಯಾಗಿದ್ದು, ಕೆಲ ಹೊತ್ತು ಅವರೊಂದಿಗೆ ಟಿಮ್ ಕುಕ್ ಮಾತುಕತೆ ನಡೆಸಿದ್ದಾರೆ.

ಇಂದು ಟಾಟಾ ಗ್ರೂಪ್ ಮುಖ್ಯಸ್ಥ ಸೈರಸ್ ಮಿಸ್ತ್ರಿ ಸೇರಿದಂತೆ ಹಲವು ಪ್ರಮುಖ ವಾಣಿಜ್ಯೋದ್ಯಮಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಿರುವ ಟಿಮ್ ಕುಕ್, ಬಳಿಕ ಬೆಂಗಳೂರು, ಹೈದರಾಬಾದ್ ಹಾಗೂ ನವದೆಹಲಿಗೂ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನೂ ಟಿಮ್ ಕುಕ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...