alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಾಖಂಡ್ ಉತ್ತರಾಧಿಕಾರಿ ಯಾರು ಗೊತ್ತಾ..?

uk-trive

ನವದೆಹಲಿ: ಉತ್ತರಾಖಂಡ್ ನಲ್ಲಿ ಭರ್ಜರಿ ಜಯಗಳಿಸಿರುವ ಬಿ.ಜೆ.ಪಿ. ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಆರ್.ಎಸ್.ಎಸ್. ಮಾಜಿ ಪ್ರಚಾರಕ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಆಯ್ಕೆಮಾಡಲಾಗಿದೆ.

ಕಳೆದ ರಾತ್ರಿ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳುವಂತೆ ಮಾಹಿತಿ ನೀಡಿದ್ದಾರೆ. ಇಂದು ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗುವುದು.

ನಾಳೆ ಮಧ್ಯಾಹ್ನ ತ್ರಿವೇಂದ್ರ ಸಿಂಗ್ ರಾವತ್ ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸತ್ಪಾಲ್ ಮಹಾರಾಜ್ ಮತ್ತು ಪ್ರಕಾಶ್ ಪಂತ್ ಅವರ ಹೆಸರು ಸಿ.ಎಂ. ಹುದ್ದೆಯ ರೇಸ್ ನಲ್ಲಿದ್ದರೂ, ವರಿಷ್ಠರು ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಆಯ್ಕೆ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...