alex Certify
ಕನ್ನಡ ದುನಿಯಾ       Mobile App
       

Kannada Duniya

ಮೆಹ್ಸಾನಾ ದಂಗೆ ಪ್ರಕರಣದಲ್ಲಿ ಹಾರ್ದಿಕ್ ಪಟೇಲ್ ಗೆ ಜೈಲು

ಪಾಟೀದಾರರ ಮೀಸಲಾತಿಗಾಗಿ 2015ರಲ್ಲಿ ನಡೆದ ಮೆಹ್ಸಾನಾ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಸೇರಿ ಮೂವರನ್ನು ಕೋರ್ಟ್ ಅಪರಾಧಿಗಳೆಂದು ತೀರ್ಪು ನೀಡಿದೆ. 2015ರಲ್ಲಿ ಪಾಟೀದಾರ ಮೀಸಲಾತಿ ಹೋರಾಟ ನಡೆದಿತ್ತು. ಅದ್ರಲ್ಲಿ ಹಾರ್ದಿಕ್ ಪಟೇಲ್ ಪ್ರಮುಖ ಪಾತ್ರ ವಹಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಹಾರ್ದಿಕ್ ಪಟೇಲ್ ಹಾಗೂ ಪಟೇಲ್ ಸಂಘದ ಅಧ್ಯಕ್ಷ ಲಾಲ್ಜಿ ಪಟೇಲ್ ಹಾಗೂ ಅಂಬಾಲಾಲ್ ಪಟೇಲರಿಗೆ 2 ವರ್ಷಗಳ ಶಿಕ್ಷೆ ವಿಧಿಸಿದೆ. ತಲಾ 50 ಸಾವಿರ ರೂಪಾಯಿ ದಂಡ ವಿಧಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್ 14 ಮಂದಿಯನ್ನು ನಿರ್ದೋಷಿಗಳೆಂದು ತೀರ್ಪು ನೀಡಿದೆ. ತೀರ್ಪಿನ ನಂತ್ರ ಟ್ವಿಟ್ ಮಾಡಿರುವ ಹಾರ್ದಿಕ್ ಇಂಕ್ವಿಲಾಬ್ ಜಿಂದಾಬಾದ್ ಎಂದು ಬರೆದಿದ್ದಾರೆ.

ಪಟೀದಾರ ಆಂದೋಲನದ ವೇಳೆ ಬಿಜೆಪಿ ಶಾಸಕ ರಿಶಿಕೇಶ್ ಪಟೇಲರ ಕಚೇರಿಯನ್ನು ದ್ವಂಸಗೊಳಿಸಲಾಗಿತ್ತು. ಈ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣ ಗುಜರಾತಿನ ವಿಸಾನಗರ ಕೋರ್ಟ್ ಮೆಟ್ಟಿಲೇರಿತ್ತು. ದೀರ್ಘ ವಿಚಾರಣೆ ನಂತ್ರ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...