alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಗೆ ಕರೆ ಮಾಡಿದ ಡೊನಾಲ್ಡ್ ಟ್ರಂಪ್

tru-us

ನವದೆಹಲಿ: ಜನವರಿ 20 ರಂದು ಅಮೆರಿಕದ 45 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ, ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದಾರೆ.

ತಡರಾತ್ರಿ 11.30 ರ ಸುಮಾರಿಗೆ ಮೋದಿ ಅವರೊಂದಿಗೆ ಮಾತನಾಡಿದ ಟ್ರಂಪ್, ಆರ್ಥಿಕತೆ, ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರ, ಪ್ರಾದೇಶಿಕ ಭದ್ರತೆ ವಿಚಾರಗಳಲ್ಲಿ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಜಾಗತಿಕ ಸಮಸ್ಯೆ ಎದುರಿಸುವ ಸಂದರ್ಭದಲ್ಲಿ ಭಾರತವನ್ನು ಸ್ನೇಹಿತನೆಂದು ಅಮೆರಿಕ ಪರಿಗಣಿಸುತ್ತದೆ ಎಂದು ಹೇಳಿರುವ ಟ್ರಂಪ್, ಅಮೆರಿಕಕ್ಕೆ ಭೇಟಿ ನೀಡುವಂತೆ ಮೋದಿಗೆ ಆಹ್ವಾನ ನೀಡಿದ್ದಾರೆ.

ಐ.ಟಿ. ಉದ್ಯೋಗಿಗಳ ಆತಂಕಕ್ಕೆ ಕಾರಣವಾಗಿರುವ ಹೆಚ್. 1 ಬಿ ವೀಸಾದ ಕುರಿತಾಗಿಯೂ ಉಭಯ ನಾಯಕರ ನಡುವೆ ಚರ್ಚೆ ನಡೆದಿದೆ.

ಟ್ರಂಪ್ ಅಧ್ಯಕ್ಷರಾದ ಬಳಿಕ ಮಾತನಾಡಿದ 5 ನೇ ಜಾಗತಿಕ ನಾಯಕ ಮೋದಿ ಆಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...