alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತದಲ್ಲಿನ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯೆಷ್ಟು ಗೊತ್ತಾ..?

50884935

ಭಾರತದಲ್ಲಿ ವೇಶ್ಯಾವಾಟಿಕೆ ಕಾನೂನು ಬಾಹಿರವಾಗಿದ್ದರೂ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನಲ್ಲಿರುವ ಲಭ್ಯ ಮಾಹಿತಿ ಪ್ರಕಾರ ದೇಶದಲ್ಲಿನ ಲೈಂಗಿಕ ಕಾರ್ಯಕರ್ತೆಯರ ವಿವರ ನೀಡಿದೆ.

ದೆಹಲಿ ಮೂಲದ ವೇದ್ ಪಾಲ್ ಎಂಬವರು ಈ ಮಾಹಿತಿ ಕೋರಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಉತ್ತರ ನೀಡಿರುವ ಇಲಾಖೆ, ದೇಶದಲ್ಲಿ ಒಟ್ಟು 8.6 ಲಕ್ಷ ಲೈಂಗಿಕ ಕಾರ್ಯಕರ್ತೆಯರು ಇದ್ದಾರೆಂಬ ಮಾಹಿತಿ ನೀಡಿದೆ.

ಆಂಧ್ರ ಪ್ರದೇಶದಲ್ಲಿ ಅತಿ ಹೆಚ್ಚು ಅಂದರೆ 1,36,794 ಮಂದಿ ಲೈಂಗಿಕ ಕಾರ್ಯಕರ್ತೆಯರಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇವರ ಸಂಖ್ಯೆ 61,000 ಎಂದು ತಿಳಿಸಲಾಗಿದೆ. ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 86,386 ಮಂದಿ ಹಾಗೂ 85,416 ಲೈಂಗಿಕ ಕಾರ್ಯಕರ್ತೆಯರಿರುವ ಮಹಾರಾಷ್ಟ್ರ ಮೂರನೇ ಸ್ಥಾನದಲ್ಲಿದೆ ಎಂಬ ಮಾಹಿತಿ ನೀಡಲಾಗಿದೆ. 2009 ರಲ್ಲಿ ಈ ಅಂಕಿ- ಸಂಖ್ಯೆ ಕಲೆ ಹಾಕಲಾಗಿದ್ದು, ಈಗ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...