alex Certify
ಕನ್ನಡ ದುನಿಯಾ       Mobile App
       

Kannada Duniya

ತೆರಿಗೆಗಳ್ಳರಿಗೆ ಖಡಕ್ ಎಚ್ಚರಿಕೆ ನೀಡಿದ ಅರುಣ್ ಜೇಟ್ಲಿ

445395-arun-jaitley-start-up-india-pti

ಪನಾಮದ ಮೊಸ್ಯಾಕ್ ಫೋನ್ಸೆಕ ಎಂಬ ಕಾನೂನು ಸಂಸ್ಥೆಯಿಂದ ಸೋರಿಕೆಯಾದ ದಾಖಲೆಗಳಲ್ಲಿ ಸುಮಾರು 500 ಭಾರತೀಯರ ಹೆಸರು ಹೊರ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ತೆರಿಗೆ ವಂಚಕರಿಗೆ ಮುಂದೆ ಭಾರೀ ಆಪತ್ತು ಕಾದಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ನಮ್ಮ ಸರ್ಕಾರ ಕಪ್ಪುಹಣವನ್ನು ಭಾರತಕ್ಕೆ ತರುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಘೋಷಿಸಿದೆ. ಆದರೂ ಸಹ ತೆರಿಗೆ ವಂಚಕರು ಕಾನೂನಿನಿಂದ ತಪ್ಪಿಸಿಕೊಳ್ಳುವ ದುಸ್ಸಾಹಸಕ್ಕೆ ಮುಂದಾಗಿದ್ದರೆ ಅದು ಅವರಿಗೆ ದುಬಾರಿಯಾಗಲಿದೆ ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ವಿಶೇಷವೆಂದರೆ ತೆರಿಗೆಗಳ್ಳರ ಸ್ವರ್ಗ ಎಂದೇ ಹೇಳಲಾಗುವ ಪನಾಮಾದಲ್ಲಿ ಅಕ್ರಮ ಆಸ್ತಿ ಹೊಂದಿರುವ 500 ಮಂದಿ ಭಾರತೀಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇವರಲ್ಲಿ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಸಿನಿಮಾ ನಟರು, ಉದ್ಯಮಿಗಳು ಹಾಗೂ ರಾಜಕಾರಣಿಗಳ ಹೆಸರೂ ಇರುವುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...