alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಸ್ ಪೋರ್ಟ್ ರದ್ದು: ಮಲ್ಯಗೆ ಎದುರಾಯ್ತು ಸಂಕಷ್ಟ

vijaymallya660

ಸಾಲದ ಸುಳಿಯಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿರುವ ಮದ್ಯ ದೊರೆ ವಿಜಯ್ ಮಲ್ಯ ಅವರ ಪಾಸ್ ಪೋರ್ಟ್ ಅನ್ನು ರದ್ದುಗೊಳಿಸಲಾಗಿದ್ದು, ಹಾಗಾಗಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಹೌದು. ಹಲವು ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದಿದ್ದ ಮಲ್ಯಗೆ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಸಾಕಷ್ಟು ಬಾರಿ ನೋಟಿಸ್ ನೀಡಲಾಗಿದ್ದರೂ ಸಹ ತನಿಖೆಗೆ ಸಹಕಾರ ನೀಡಿರಲಿಲ್ಲ. ಹೀಗಾಗಿ ಬ್ಯಾಂಕ್ ಗಳ ಮನವಿ ಮೇರೆಗೆ ಕಳೆದ ವಾರ ವಿಜಯ್ ಮಲ್ಯ ಪಾಸ್ ಪೋರ್ಟ್ ನ್ನು ಅಮಾನತಿನಲ್ಲಿ ಇಡಲಾಗಿತ್ತಲ್ಲದೇ ಜಾರಿ ನಿರ್ದೇಶನಾಲಯ ಮಲ್ಯರನ್ನು ಗಡಿಪಾರು ಮಾಡುವಂತೆ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆ ಮಲ್ಯ ಅವರ ಪಾಸ್ ಪೋರ್ಟ್ ನ್ನು ರದ್ದು ಮಾಡಿದ್ದು, ಹೀಗಾಗಿ ಮಲ್ಯ ಭಾರತಕ್ಕೆ ಹಿಂದಿರುಗಬೇಕಾದ ಅನಿವಾರ್ಯತೆ ಎದುರಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...