alex Certify
ಕನ್ನಡ ದುನಿಯಾ       Mobile App
       

Kannada Duniya

ಅಬಕಾರಿ ಸುಂಕ: ವಾಹನ ಸವಾರರಿಗೆ ‘ಶಾಕಿಂಗ್ ಸುದ್ದಿ’

ನವದೆಹಲಿ: ದಕ್ಷಿಣ ಏಷ್ಯಾದ ದೇಶಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಬಾರಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆಗಳಿಂದಾಗಿ ಶೇ. 50 ರಷ್ಟು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ.

ಪ್ರಸಕ್ತ ಸಾಲಿನಲ್ಲಿ ಹಣಕಾಸು ಸ್ಥಿತಿ ಬಿಗಿಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ಸಾಧ್ಯತೆ ಇಲ್ಲ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಏರುಗತಿಯಲ್ಲಿದ್ದು, ಗ್ರಾಹಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಫೆಬ್ರವರಿ 1 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂ. ಕಡಿತಗೊಳಿಸಿತ್ತು. ಆದರೆ, ಇದೇ ಸಂದರ್ಭದಲ್ಲಿ ಹೊಸ ತೆರಿಗೆಗಳು ಜಾರಿಯಾದ ಕಾರಣ ಬೆಲೆ ಇಳಿಕೆಯಾಗಿದ್ದರೂ, ಗ್ರಾಹಕರಿಗೆ ಅನುಕೂಲವಾಗಿಲ್ಲ.

ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ, ಮುಂದಿನ ದಿನಗಳಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಸಾಧ್ಯತೆ ಇಲ್ಲವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...