alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರ್ಯ ದಿನದಂದು ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿಯವರು ಹೇಳಿದ್ದೇನು…?

ಭಾರತ ಇಂದು ತನ್ನ 72 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ದೇಶದ ಅಭಿವೃದ್ದಿ ಕುರಿತು ತಮ್ಮ ಕನಸುಗಳನ್ನು ಬಿಚ್ಚಿಟ್ಟ ಪ್ರಧಾನಿಯವರು, ಈ ನಾಲ್ಕು ವರ್ಷದ ಅಧಿಕಾರಾವಧಿಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.

ಭಾರತ ಇಂದು ವಿಶ್ವದ ಆರನೇ ಆರ್ಥಿಕತೆಯಾಗಿ ರೂಪುಗೊಂಡಿದೆ. ಜಿ.ಎಸ್.ಟಿ. ಜಾರಿಯಿಂದ ಏಕರೂಪ ತೆರಿಗೆ ಅನುಷ್ಟಾನಕ್ಕೆ ಬಂದಿದೆ. ಒಂದು ಶ್ರೇಣಿ, ಒಂದು ಪಿಂಚಣಿ ಯೋಜನೆ ಮೂಲಕ ನಿವೃತ್ತ ಯೋಧರ ಬೇಡಿಕೆಗೆ ಸ್ಪಂದಿಸಿರುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಅತಿವೃಷ್ಟಿಯಿಂದಾಗಿ ದೇಶದ ಹಲವು ಭಾಗಗಳಲ್ಲಿ ಜನತೆ ಸಂಕಷ್ಟಕ್ಕೆ ಸಿಲುಕಿರುವುದನ್ನು ಪ್ರಸ್ತಾಪಿಸಿದ ನರೇಂದ್ರ ಮೋದಿಯವರು, ಅವರ ದುಃಖದಲ್ಲಿ ಭಾಗಿಯಾಗಿದ್ದೇವೆ ಎಂದು ಹೇಳಿದರಲ್ಲದೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...