alex Certify
ಕನ್ನಡ ದುನಿಯಾ       Mobile App
       

Kannada Duniya

ಗಡಿ ನಿಯಂತ್ರಣ ರೇಖೆಯಲ್ಲಿ 7 ಪಾಕ್ ಯೋಧರು ಫಿನಿಶ್

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ. ಎಲ್ ಓ ಸಿಯಲ್ಲಿ 7 ಪಾಕಿಸ್ತಾನಿ ಯೋಧರನ್ನು ಹೊಡೆದುರುಳಿಸಿದೆ. ಪೂಂಛ್ ಜಿಲ್ಲೆಯ ಕೊಟ್ಲಿ ವಲಯದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಒಂದೇ ಸಮನೆ ಗುಂಡಿನ ದಾಳಿ ನಡೆಸ್ತಾ ಇದ್ದ ಪಾಕಿಸ್ತಾನದ ಸೇನೆಗೆ ಭಾರತ ಪ್ರತ್ಯುತ್ತರ ನೀಡಿತ್ತು. ಭಾರತದ ಯೋಧರು ನಡೆಸಿದ ಪ್ರತಿದಾಳಿಯಲ್ಲಿ 7 ಪಾಕ್ ಸೈನಿಕರು ಹತರಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.

ಭಾರತೀಯ ಸೇನೆ ನಾಲ್ವರು ಯೋಧರನ್ನು ಹತ್ಯೆ ಮಾಡಿದೆ ಅಂತಾ ಪಾಕಿಸ್ತಾನ ಹೇಳಿಕೊಂಡಿದೆ. 70ನೇ ಸೇನಾ ದಿನಾಚರಣೆಯಲ್ಲಿ ಮಾತನಾಡಿದ್ದ ಭಾರತದ ಆರ್ಮಿ ಚೀಫ್ ಜನರಲ್, ಪಾಕಿಸ್ತಾನಕ್ಕೆ ಕಟು ಎಚ್ಚರಿಕೆ ನೀಡಿದ್ದರು.

ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ನಿಲ್ಲಿಸದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಭಾರತ ಹಿಂಜರಿಯುವುದಿಲ್ಲ ಅಂತಾ ಹೇಳಿದ್ದರು. ಅದರ ಬೆನ್ನಲ್ಲೇ ಪಾಕ್ ಯೋಧರನ್ನು ಸದೆಬಡಿಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...