alex Certify
ಕನ್ನಡ ದುನಿಯಾ       Mobile App
       

Kannada Duniya

89 ಸಾವಿರ ಹುದ್ದೆಗೆ ಬಂದಿವೆ ಎರಡು ಕೋಟಿಗೂ ಅಧಿಕ ಅರ್ಜಿ…!

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದ್ದು, ಈ ಹಿಂದೆ ಗ್ರೂಪ್ ಡಿ ಹುದ್ದೆಗೂ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿದ್ದು ವರದಿಯಾಗಿತ್ತು. ಇದೀಗ ಭಾರತೀಯ ರೈಲ್ವೇ ಇಲಾಖೆ ಆಹ್ವಾನಿಸಿರುವ ಸುಮಾರು 89 ಸಾವಿರ ಹುದ್ದೆಗಳಿಗೆ ಎರಡು ಕೋಟಿಗೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆಂಬ ಮಾಹಿತಿ ಹೊರ ಬಿದ್ದಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 31 ಕಡೆಯ ದಿನವಾಗಿದ್ದು, ಮತ್ತಷ್ಟು ಮಂದಿ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಮೊದಲಿಗೆ 26,502 ಸಹಾಯಕ ಲೋಕೋ ಪೈಲೆಟ್ ಹಾಗೂ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ 50 ಲಕ್ಷಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದರು.

ಬಳಿಕ ಗ್ರೂಪ್ ಸಿ ನ 62,907 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇದಕ್ಕೆ ಕೋಟ್ಯಾಂತರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕನ್ನಡವೂ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ನೇಮಕಾತಿ ಬಳಿಕ ರೈಲ್ವೇ ಇಲಾಖೆ ಮತ್ತೆ 9,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...