alex Certify
ಕನ್ನಡ ದುನಿಯಾ       Mobile App
       

Kannada Duniya

ಭಯೋತ್ಪಾದಕರ ವಿರುದ್ಧ ಮತ್ತೆ ಶುರುವಾಗಲಿದೆ ಮಿಲಿಟರಿ ಆಪರೇಷನ್

ಪವಿತ್ರ ತಿಂಗಳ ರಂಜಾನ್ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೆ ರಂಜಾನ್ ನಂತ್ರ ಮತ್ತೆ ಮಿಲಿಟರಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಮೂಲಗಳು ಹೇಳಿವೆ. ಉನ್ನತ ಅಧಿಕಾರಿಗಳ ಸಲಹೆ ಮೇರೆಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.

ಗುರುವಾರ ದೆಹಲಿಯ ಗೃಹ ಸಚಿವಾಲಯದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆದಿತ್ತು. ಸಭೆಯಲ್ಲಿ ಸಚಿವ ರಾಜನಾಥ್ ಸಿಂಗ್ ಪಾಲ್ಗೊಂಡಿದ್ದರು. ಮಿಲಿಟರಿ ಕಾರ್ಯಾಚರಣೆ ಮುಂದುವರೆಸಬೇಕೇ ಬೇಡವೇ ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಂಜಾನ್ ವೇಳೆ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳ್ಳಲಿದೆ. ಹಾಗಂತ ಸೈನಿಕರು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಅಗತ್ಯ ಬಿದ್ದಲ್ಲಿ ಭಯೋತ್ಪಾದಕರ ವಿರುದ್ಧ ದಾಳಿ ನಡೆಯಲಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದರು.

ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸುತ್ತಿದ್ದಂತೆ ಭಯೋತ್ಪಾದಕರು ಹೆಡೆ ಎತ್ತಲು ಶುರುಮಾಡಿದ್ದರು. ಜಮ್ಮು-ಕಾಶ್ಮೀರದಲ್ಲಿ ಅನೇಕ ಬಾರಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಮೇ 19 ರಿಂದ ಈವರೆಗೆ ನಡೆದ ಕಾರ್ಯಾಚರಣೆಯಲ್ಲಿ ಸೈನಿಕರು 17 ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ. ಈ ವೇಳೆ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...