alex Certify
ಕನ್ನಡ ದುನಿಯಾ       Mobile App
       

Kannada Duniya

​ಭಾರತೀಯರು ‘ಹೆಮ್ಮೆ’ ಪಡುವ ಸುದ್ದಿಯಿದು….!

ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಾವು ಯಾವುದರಲ್ಲೂ ಕಮ್ಮಿ ಇಲ್ಲವೆಂಬುದನ್ನು ಹತ್ತು ಹಲವು ಸಂದರ್ಭದಲ್ಲಿ ನಿರೂಪಿಸಿದ್ದಾರೆ.

ಮಹಿಳೆಯರನ್ನು ಸಬಲೆಯರನ್ನಾಗಿಸಲು ಕೇಂದ್ರ ಸರ್ಕಾರ ”ಬೇಟಿ ಪಡಾವೋ ಬೇಟಿ ಬಚಾವೋ” ಆಂದೋಲನ ಆರಂಭಿಸಿದ್ದು, ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಇದರ ಮಧ್ಯೆ ಭಾರತೀಯರು ಹೆಮ್ಮೆ ಪಡುವಂತಹ ಸುದ್ದಿಯೊಂದು ಹೊರ ಬಿದ್ದಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಮಹಿಳಾ ಪೈಲಟ್ ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಜೆ.ಎನ್. ಸಿನ್ಹಾ ಸಮಾರಂಭವೊಂದರಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಏರ್ ಇಂಡಿಯಾ ಮಾತ್ರವಲ್ಲ ಭಾರತೀಯ ವಾಯುಪಡೆಯಲ್ಲೂ ಮಹಿಳಾ ಪೈಲಟ್ ಗಳು ಗಣನೀಯ ಕೊಡುಗೆ ನೀಡುತ್ತಿದ್ದಾರೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...