alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನದ ಎಮರ್ಜೆನ್ಸಿ ಡೋರ್ ತೆಗೆದ ಪ್ರಯಾಣಿಕ

mumb-plne

ಮುಂಬೈ: ಸುಮ್ಮನಿರಲಾರದವ ಏನೋ ಮಾಡಿದಂತೆ, ವಿಮಾನ ಹಾರಾಟ ಆರಂಭಿಸುವ ಸಂದರ್ಭದಲ್ಲಿ ಪ್ರಯಾಣಿಕನೋರ್ವ ಎಮರ್ಜೆನ್ಸಿ ಡೋರ್ ಓಪನ್ ಮಾಡಿದ್ದಾನೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನ ಚಂಡೀಗಡಕ್ಕೆ ಪ್ರಯಾಣ ಬೆಳೆಸಬೇಕಿತ್ತು. 12-ಸಿ ಸೀಟ್ ನಲ್ಲಿ ಕುಳಿತಿದ್ದ ಪ್ರಯಾಣಿಕ ಒಮ್ಮೆಲೆ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾನೆ.

ಇದರಿಂದಾಗಿ ತುರ್ತು ಸಂದರ್ಭದಲ್ಲಿ ಬಳಸುವ ಪ್ಯಾರಾಚೂಟ್ ಗಳು ಹೊರಬಂದಿದ್ದು, ಸಹ ಪ್ರಯಾಣಿಕನೊಬ್ಬನಿಗೆ ಗಾಯಗಳಾಗಿವೆ.

ಪೈಲಟ್ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಗಾಯಾಳು ಪ್ರಯಾಣಿಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಭದ್ರತಾ ಲೋಪದಿಂದ ಈ ಕೃತ್ಯ ನಡೆದಿರಬಹುದೆಂದು ಹೇಳಲಾಗಿದ್ದು, ಎಫ್.ಐ.ಆರ್. ದಾಖಲಿಸಿಕೊಂಡು, ಡೋರ್ ತೆಗೆದ ಪ್ರಯಾಣಿಕನ ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...